ಪಡ್ಡಂದಡ್ಕ: ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಮಂಗಳೂರು ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮಂಗಳೂರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್ ವೇಣೂರು ವಲಯ ಕರಿಮಣೇಲು, ಹೊಸಂಗಡಿ, ಬಡಕೋಡಿ ಒಕ್ಕೂಟಗಳು; ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.); ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.); ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಗಾಂಧಿನಗರ; ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಪೆರಿಂಜೆ; ಕ್ರಿಸ್ತರಾಜ ದೇವಾಲಯ, ಭಾರತೀಯ ಕಥೊಲಿಕ್ ಯುವ ಸಂಚಾಲನ (ICYM) ವೇಣೂರು ಘಟಕ; ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು; ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆಧ್ಯ ಗೌಡ್ ಬ್ರಾಹ್ಮಣ ಸಂಘ (ರಿ.); ಬಂಟರ ಗ್ರಾಮ ಸಮಿತಿ, ಹೊಸಂಗಡಿ ಬಡಕೋಡಿ; ಜನಸೇವಾ ಟ್ರಸ್ಟ್ ಪಡ್ಡಂದಡ್ಕ (ರಿ.) ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ (ರಿ.) ಪಡ್ಡಂದಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಬೃಹತ್ ಉಚಿತ ವೈದ್ಯಕೀಯ, ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರವು ಜು. 27ರಂದು ಸಮುದಾಯ ಭವನ, ಪಡ್ಡಂದಡ್ಕ ಇಲ್ಲಿ ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ ಗಂಟೆ 1.00ರವರೆಗೆ (ನೋಂದಣಿ ಮಧ್ಯಾಹ್ನ ಗಂಟೆ 12.30ರ ವರೆಗೆ ಮಾತ್ರ) ಜರಗಲಿದೆ.
ಸಾಮಾನ್ಯ ರೋಗ ವಿಭಾಗ ಎಲುಬು ಮತ್ತು ಕೀಲು ರೋಗ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಕ್ಯಾನ್ಸರ್ ತಪಾಸಣೆ, ಕಣ್ಣಿನ ವಿಭಾಗ, ಹೃದಯ ರೋಗ, ಇಂಡಿಯನ್ ಕ್ಯಾನ್ಸರ್ ಸೊಸೈಟಿಯವರ ಸಹಯೋಗದೊಂದಿಗೆ ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರ ಮಾರ್ಗಪ್ರನದಲ್ಲಿ ಕ್ಯಾನ್ಸರ್ ತಪಾಸಣೆಯು ನಡೆಯಲಿದೆ. ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಸ್ತ್ರೀಯರ ತಪಾಸಣೆ, ಪುರುಷರಿಗೆ ಹಾಗೂ ಸ್ತ್ರೀಯರಿಗೆ ಪ್ರತ್ಯೇಕ ಹಾಗೂ ಬಿ.ಪಿ. ಹಾಗೂ ಮಧುಮೇಹ (ಶುಗರ್) ತಪಾಸಣೆ ತಪಾಸಣೆಯು ಲಭ್ಯವಿದೆ.