ಹೆತ್ತ ತಾಯಿಯನ್ನೇ ಕಡಿದು ಕೊಲೆಗೈದ ಪಾಪಿ ಪುತ್ರ!

0
13

ನೂಹ್: ಹಣ ಕೊಡಲಿಲ್ಲ ಎನ್ನವು ಮದ್ಯದ ಅಮಲಿನಲ್ಲಿ ಪಾಪಿ ಪುತ್ರನೊಬ್ಬ ಹೆತ್ತ ತಾಯಿಯನ್ನೇ ಕಡಿದು ಕೊಲೆ ಮಾಡಿರುವ ಹೃದಯ ವಿದ್ರಾಹಕ ಘಟನೆ ಹರ್ಯಾಣದ ನೂಹ್​ನಲ್ಲಿ ನಡೆದಿದೆ. ಕೇವಲ 20 ರೂಪಾಯಿಗಾಗಿ 56 ವರ್ಷದ ತಾಯಿಯನ್ನು ಮಗ ಹತ್ಯೆ ಮಾಡಿದ್ದಾನೆ. ಜೈಸಿಂಗ್‌ಪುರ ಗ್ರಾಮದಲ್ಲಿ ಶನಿವಾರ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಗ ಮಾದಕ ವ್ಯಸನಿಯಾಗಿದ್ದು, ಬಹಳ ದಿನಗಳಿಂದ ಗಾಂಜಾ ಮತ್ತು ಅಫೀಮು ಸೇವಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ ಸ್ಥಿತಿಯಲ್ಲಿದ್ದ ತಾಯಿ ಜತೆಯೇ ಒಂದೇ ಮನೆಯಲ್ಲಿ ಆತ ಇಡೀ ರಾತ್ರಿ ಕಳೆದಿದ್ದಾನೆ. ಶನಿವಾರ ರಾತ್ರಿ ಜೆಮ್ಶೆಡ್ ಎಂಬಾತ ತಾಯಿ ರಜಿಯಾ ಬಳಿ 20 ರೂ. ಕೊಡುವಂತೆ ಕೇಳಿದ್ದ. ಆದರೆ ಅವರು ನಿರಾಕರಿಸಿದ್ದರು. ಅದಕ್ಕೆ ಕೋಪಗೊಂಡ ಮಗ ತಾಯಿಯನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ. ಎಫ್​ಐಆರ್ ದಾಖಲಿಸಲಾಗಿದೆ, ಮರಣೋತ್ತರ ಪರೀಕ್ಷೆಯ ನಂತರ ರಾಜಿಯಾ ಅವರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ರಾಜಿಯಾ ಅವರ ಪತಿ ಮುಬಾರಕ್ ಕೇವಲ ನಾಲ್ಕು ತಿಂಗಳ ಹಿಂದೆ ನಿಧನರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here