ತುಳುನಾಡ ರಕ್ಷಣಾ ವೇದಿಕೆ ಕಾಪು ಘಟಕ: ಕಾರ್ಯಕರ್ತರ ಸಮ್ಮೇಳನ

0
115

ಕಾಪು : ಕಾಪು ತುಳುನಾಡ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ಕಾರ್ಯಕರ್ತರ ಸಮ್ಮೇಳನವು ಜು. 20ರಂದು ಹಿರಿಯಡ್ಕ ದ ಕೋಟ್ನಕಟ್ಟೆ ಸುರಭಿ ಹಾಲ್ ನಲ್ಲಿ ನಡೆಯಿತು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು, ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ-ವಿಚಾರ, ಸಂಸ್ಕೃತಿ, ಆಹಾರ ಪದ್ಧತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು ಉತ್ತಮ ಬೆಳವಣಿಗೆ. ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ ರಾಜ್ಯ ದ ಅಧಿಕೃತ ಭಾಷೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತುಳುನಾಡ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸುವ ಒತ್ತಾಯಿಸುವ ದೃಷ್ಟಿಯಿಂದ ಈ ಸಮ್ಮೇಳನ ಆಯೋಜಿಸಿದ್ದು ತುಳುನಾಡ ರಕ್ಷಣಾ ವೇದಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದರು.

ತುಳುನಾಡ ರಕ್ಷಣಾ ವೇದಿಕೆಗೆ ಹಲವು ಮಂದಿ ನೂತನ ಕಾರ್ಯಕರ್ತರು ಸೇರ್ಪಡೆಗೊಂಡಿದ್ದು, ಅವರಿಗೆ ತುಳು ಬಾವುಟ ನೀಡಿ ಸ್ವಾಗತಿಸಲಾಯಿತು.
ಸಭೆಗೆ ಆಗಮಿಸಿದ್ದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ , ತುಳು ಭಾಷೆ ಪಂಚ ದ್ರಾವಿಡ ಭಾಷೆಯಲ್ಲಿ ಒಂದಾಗಿದೆ. ಇತ್ತೀಚೆಗೆ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ರವರೊಂದಿಗೆ ದೆಹಲಿಗೆ ತೆರಳಿ ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದೆ. ಹಾಗೂ ವಿಧಾನಸಭೆಯಲ್ಲಿ ತುಳು ಭಾಷೆ ಅಧಿಕೃತ ಭಾಷೆ ಮಾನ್ಯತೆ ನೀಡುವಂತೆ ಧ್ವನಿ ಎತ್ತಿರುವುದಾಗಿ ತಿಳಿಸಿದರು. ತುಳುನಾಡ ರಕ್ಷಣಾ ವೇದಿಕೆಯ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸದಾ ತನ್ನ ಸಹಕಾರವಿದೆ ಎಂದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು, ತುಳುನಾಡ ರಕ್ಷಣಾ ವೇದಿಕೆ ಕಳೆದ 16 ವರ್ಷಗಳಿಂದ ಸಮಾಜದ ನೊಂದವರ ಪರವಾಗಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಇದೀಗ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಮಿತಿ ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿದೆ ಎಂದರು.
ಮುಖ್ಯ ಅಭ್ಯಾಗತರಾಗಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ , ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಜಿಲ್ಲಾ ವೈದ್ಯರ ಘಟಕ ಅಧ್ಯಕ್ಷ ಸಂದೀಪ್ ಸನಿಲ್, ಕಾರ್ಮಿಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ, ಮಹಿಳಾ ಜಿಲ್ಲಾಧ್ಯಕ್ಷ ಸುನಂದ ಕೋಟ್ಯಾನ್, ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಗೌರವ ಸಲಹೆಗಾರ ಸುಧಾಕರ್ ಅಮೀನ್ ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಜಿಲ್ಲಾ ಐಟಿ.ಸೆಲ್ ಮುಖ್ಯಸ್ಥ ಸತೀಶ್ ಪೂಜಾರಿ ಕೀಳಂಜೆ, ಜಿಲ್ಲಾ ಉಪಾಧ್ಯಕ್ಷ ನಡುಮನೆ ಗುತ್ತು ಉಮೇಶ್ ಶೆಟ್ಟಿ ಬಾಣಬೆಟ್ಟು , ಜಿಲ್ಲಾ ಸಂಘಟನೆ ಕಾರ್ಯದರ್ಶಿ ಸುನಿಲ್ ಪೆರ್ನಾಂಡಿಸ್, , ಬ್ರಹ್ಮಾವರ್ ತಾಲೂಕು ಘಟಕ ಅಧ್ಯಕ್ಷ ಪ್ರದೀಪ್ ಪೂಜಾರಿ (ದೀಪು ಚಾಂತಾರ್) , ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಕಾರ್ಕಳ ತಾಲೂಕು ಅಧ್ಯಕ್ಷ ರಾಮಕಾಂತ್ ಶೆಟ್ಟಿ ಕರ್ಮರ್ ಕಟ್ಟೆ , ಕಾಪು ಮಹಿಳಾಧ್ಯಕ್ಷೆ ಅನುಸೂಯ ಶೆಟ್ಟಿ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಾಲ್ ಅಮೀನ್ ಬೇಂಗ್ರೆ, ಬೈರಂಪಳ್ಳಿ ಘಟಕ ಅಧ್ಯಕ್ಷ ಕೃಷ್ಣಾನಂದ ನಾಯಕ್, ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತೀಕ್ ಕುಲಾಲ್, ಬೈರಂಪಳ್ಳಿ ಘಟಕ ಕಾರ್ಯದರ್ಶಿ ರಂಜಿತ್ ಕುಲಾಲ್, ಅಜಯ ಕುಲಾಲ್, ಸಚಿನ್ ಶೆಟ್ಟಿ, ಕಾರ್ತಿಕ್ ಆಚಾರ್ಯ, ಕಿರಣ್ ಸುದೀಪ್, ಜಗದೀಶ್, ಮಂಜು, ಶೋಧನ್ ಶೆಟ್ಟಿ , ಪ್ರಸಾದ್ ಶೆಟ್ಟಿ, ಗುಣಕರ್ , ಸುಕೇಶ್, ತೇಜಸ್, ಗಣೇಶ್ ಕುಲಾಲ್ , ಸಂಪತ್, ಅಮರ್, ಶ್ರಾವಣ್ ಪೂಜಾರಿ, ಹರ್ಷ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಲಾವಣ್ಯ ಕುಲಾಲ್ ಪ್ರಾರ್ಥಿಸಿ, ಪ್ರದೀಪ್ ಸ್ವಾಗತಿಸಿ, ಶ್ವೇತಾ ವಂದಿಸಿದರು. ಅಕ್ಷತಾ ಕುಲಾಲ್ ಮತ್ತು ಜಗದೀಶ್ ನಾಯಕ್ ನಿರೂಪಿಸಿದರು.

LEAVE A REPLY

Please enter your comment!
Please enter your name here