ಬಂಟ್ವಾಳ: ಪುರಸಭೆ ಸದಸ್ಯ ಜನಾರ್ದನ ಚೆಂಡ್ತಿಮಾರ್ ನಿಧನ

0
153

ಬಂಟ್ವಾಳ: ಇಲ್ಲಿನ ಚೆಂಡ್ತಿಮಾರ್ ನಿವಾಸಿ, ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್ (55) ಇವರು ಅಸೌಖ್ಯದಿಂದ ಸೋಮವಾರ ಮುಂಜಾನೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಆದಿ ದ್ರಾವಿಡ ಸಮಾಜ ಸೇವಾ ಸಂಘದ ಗೌರವ ಸಲಹೆಗಾರರಾಗಿ, ಚೆಂಡ್ತಿಮಾರ್ ಶ್ರೀ ಮಹಾಲಿಂಗೇಶ್ವರ ಭಜನಾ ಮಂದಿರ ಅಧ್ಯಕ್ಷರಾಗಿ, ಅಲೇರಿ ಮೂಲಸ್ಥಾನ ಉಪಾಧ್ಯಕ್ಷರಾಗಿ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಶೋಷಿತ ವರ್ಗಗಳ ಧ್ವನಿಯಾಗಿದ್ದರು. ಮೃತರ ಅಂತ್ಯಕ್ರಿಯೆ ಬಂಟ್ವಾಳ ಸ್ಮಶಾನದಲ್ಲಿ ಸೋಮವಾರ ಮಧ್ಯಾಹ್ನ ನೆರವೇರಿತು.
ಅಂತಿಮ ನಮನ: ಬಿ.ಸಿ.ರೋಡು ಅಂಬೇಡ್ಕರ್ ಭವನದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಅಪಾರ ಮಂದಿ ಸಾರ್ವಜನಿಕರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here