ಮೂಡುಬಿದಿರೆ: ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರು ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)-2.0ಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಫಲಾನುಭವಿಗಳು ಅರ್ಜಿಯನ್ನು Unified Web Portal link (URLaddress: https:// Pmay-urban-gov.in) ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ ಎಂದು ಮೂಡುಬಿದಿರೆಯ ಪುರಸಭೆ ಪ್ರಕಟಣೆ ತಿಳಿಸಿದೆ.
ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು
.ಆಧಾರ್ ಕಾರ್ಡ್ , ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು (ಹಕ್ಕುಪತ್ರ/ ಕ್ರಯ ಪತ್ರ/ದಾನ ಪತ್ರ/ಉಡುಗೊರೆ ಪತ್ರ/ ಖಾತೆ) ,ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ಮೊಬೈಲ್ ಸಂಖ್ಯೆ.