ಬೆಂಗಳೂರು: ಕರ್ನಾಟಕದಲ್ಲಿರುವ ಅರಣ್ಯ (Forest) ಪ್ರದೇಶದೊಳಗೆ ದನಕರು (cattle), ಮೇಕೆ, ಕುರಿ ( sheep, goat) ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.