ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಬಾಲಗಂಗಾಧರ ತಿಲಕರ ಜನ್ಮದಿನಾಚರಣೆ

0
147

ನಂದಳಿಕೆ: ದೇಶ ಪ್ರೇಮ ಮತ್ತು ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಜನಸಾಮಾನ್ಯರಲ್ಲಿ ಉದ್ದೀಪನಗೊಳಿಸಿ, ಭಕ್ತಿಯಿಂದ ಶಕ್ತಿಯ ಸಂಚಲನವನ್ನು ರಾಷ್ಟ್ರದಾದ್ಯಂತ ಜಾಗೃತಗೊಳಿಸಿದ ಲೋಕಮಾನ್ಯ ಬಾಲಗಂಗಾಧರ ತಿಲಕರ ದೂರದೃಷ್ಠಿತ್ವದ ಕನಸಿನ ಕೂಸು ಇಂದಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಬ್ಬ ರಾಷ್ಟ್ರೀಯ ಭಾವೈಕ್ಯತೆಯ ಪ್ರತೀಕ ಎಂದು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಹೇಳಿದರು.
ಅವರು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆದ ಲೋಕಮಾನ್ಯ ಬಾಲಗಂಗಾಧರ ತಿಲಕರ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಲೋಕಮಾನ್ಯ ಬಾಲಗಂಗಾಧರ ತಿಲಕರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಮಾತನಾಡಿದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿ, ಬಾಲಗಂಗಾಧರ ತಿಲಕರು ಭಾರತೀಯ ರಾಷ್ಟ್ರೀಯವಾದಿ, ಸಮಾಜ ಸುಧಾಕರು ಹಾಗೂ ಸ್ವಾತಂತ್ರ್ಯ ಹೊರಾಟಗಾರರಾದ ತಿಲಕರು ಬಹುಶಃ ಭಾರತದ ಸ್ವಾತಂತ್ರ್ಯ ಚಳುವಳಿಯ ಮೊದಲನೆಯ ಜನಪ್ರಿಯ ನಾಯಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಉದಯ ಅಂಚನ್, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಸದಸ್ಯರಾದ ಸುರೇಶ್ ಅಬ್ಬನಡ್ಕ, ಹರೀಶ್ ಗೋಳಿಕಟ್ಟೆ, ಶಾಂತರಾಮ್ ಕುಲಾಲ್, ಪ್ರದೀಪ್ ಸುವರ್ಣ, ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here