ಸುರತ್ಕಲ್‌ ಎನ್‌ಐಟಿಕೆ ಬಿ.ಟೆಕ್. ವಿದ್ಯಾರ್ಥಿನಿ ಆತ್ಮಹತ್ಯೆ

0
108

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ತಾಲೂಕು ವೈದ್ಯಾಧಿಕಾರಿಯ ಪುತ್ರಿಯೊಬ್ಬಳು ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ ರಕ್ಷಾ ಅರುಣ್ ನಾಯಕ್ (23) ಎಂದು ಗುರುತಿಸಲಾಗಿದ್ದು, ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಬಿ.ಟೆಕ್ . ವ್ಯಾಸಂಗ ಮಾಡುತ್ತಿದ್ದಳು..

ಪೊಲೀಸ್ ಮೂಲಗಳ ಪ್ರಕಾರ, ರಕ್ಷಾ ಬಿ.ಟೆಕ್ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿದ್ದಳು. ಈ ಬಗ್ಗೆ ಪೋಷಕರು ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ರಕ್ಷಾ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಯು ಕಾರವಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here