ಕಲ್ಲಡ್ಕ : ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತಾಗಿದೆ ಎಂದು ಮಾಜಿ ಶಾಸಕರಾದ ಎ ರುಕ್ಮಯ ಪೂಜಾರಿ ಹೇಳಿದರು.
ಅವರು ಭಾನುವಾರ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳು ಒಕ್ಕೂಟ ಕಲ್ಲಡ್ಕ ಗೋಳ್ತಮಜಲು ಎ ಮತ್ತು ಗೋಳ್ತಮಜಲು ಸಿ, ಬಾಳ್ತಿಲ ಒಕ್ಕೂಟಗಳ ಜಂಟಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷರಾದ ತುಳಸಿ ಕೊಳಕಿರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕರಾದ ಬಾಬು ನಾಯ್ಕ್ ಯೋಜನೆ ಬಂಟ್ವಾಳ ತಾಲೂಕಿನಲ್ಲಿ ಪ್ರಾರಂಭವಾಗಿ 20 ವರ್ಷಗಳಲ್ಲಿ ಮಾಡಿದ ಕಾರ್ಯ ಸಾಧನೆ ಹಾಗೂ ಸಮುದಾಯಕ್ಕೆ ನೀಡಿದ ಸಹಕಾರವನ್ನು ಸದಸ್ಯರುಗಳಿಗೆ ಮತ್ತೊಮ್ಮೆ ನೆನಪಿಸಿದರು.
ಕಾರ್ಯಕ್ರಮದಲ್ಲಿ ಕಳೆದ ಮೂರು ವರ್ಷ ವಲಯ ಮೇಲ್ವಿಚಾರಕಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಸುಗುಣಶೆಟ್ಟಿಯವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿರುವ ಸೇವಾ ಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳನ್ನು ಗುರುತಿಸಿ ಗೌರವಿಸಿ ಪರಿಸರ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರತಿಯೊಬ್ಬರಿಗೂ ಸಸಿ ವಿತರಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಸುಮಂಗಲ ಕ್ರೆಡಿಕೋ ಬ್ಯಾಂಕ್ ಪಾಣೆಮಂಗಳೂರು ಅಧ್ಯಕ್ಷರಾದ ನಾಗೇಶ್ ಕಲ್ಲಡ್ಕ, ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ನವೀನ್ ಚಂದ್ರ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಬಂಗೇರ, ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ದನ ಪೂಜಾರಿ, ಮಾಜಿ ವಲಯ ಅಧ್ಯಕ್ಷರಾದ ಶೇಖರ ಪೂಜಾರಿ, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಲ್ಲಡ್ಕ ಅಧ್ಯಕ್ಷರಾದ ಮಾದವ ಸಾಲಿಯಾನ, ಒಕ್ಕೂಟದ ಅಧ್ಯಕ್ಷರುಗಳಾದ ಉಮಾವತಿ ಪುರ್ಲಿ ಪಾಡಿ, ಮಮತಾ ಶಂಭುಗ, ಮಮತಾ, ಸೀತಾರಾಮ ನೆಟ್ಲ, ಒಕ್ಕೂಟಗಳ ಸೇವಾ ಪ್ರತಿನಿಧಿಗಳಾದ ವಿದ್ಯಾ ,ಸುಕನ್ಯ, ಗಣೇಶ್ ಲೀಲಾವತಿ ,ರೇವತಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಮೊದಲು ಉಳ್ಳಾಲ್ತಿ ಭಜನಾ ಮಂಡಳಿ ಕಾಂಪ್ರಬೈಲು ಇವರಿಂದ ಭಜನಾ ಕಾರ್ಯಕ್ರಮ ಜರಗಿತು. ಕಲ್ಲಡ್ಕ ವಲಯ ಮೇಲ್ವಿಚಾರಕ ಸುಕರಾಜ್ ಸ್ವಾಗತಿಸಿ, ಸೇವಾ ಪ್ರತಿನಿಧಿ ವಿದ್ಯಾ ವರದಿ ವಾಚಿಸಿ, ಸಂತೋಷ ಕುಮಾರ್ ಬೊಲ್ಪೊಡಿ ಕಾರ್ಯಕ್ರಮ ನಿರಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.