ಶ್ರೀ ಶಿರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ

0
11

ಉಡುಪಿ: ದಿನಾಂಕ 02-08-2025 ನೇ ಶನಿವಾರ ಸಂಜೆ ಗಂಟೆ 4-30ಕ್ಕೆ ಶ್ರೀ ಕೃಷ್ಣಾಪುರ ಮಠದ ಶ್ರೀಕೃಷ್ಣ ಸಭಾಭವನದಲ್ಲಿ ಶಿರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಅಂಗವಾಗಿ ಸ್ವಾಗತ ಸಮಿತಿಯ ಪದಾಧಿಕಾರಿಗಳ ಪ್ರಥಮ ಸಭೆಯನ್ನು ಆಯೋಜಿಸಲಾಗಿದೆ.

ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಭಕ್ತರಾದ ತಾವು ಪರ್ಯಾಯ ಮಹೋತ್ಸವದ ಅಂಗವಾಗಿ ಮುಂದಿನ ಕಾರ್ಯಕ್ರಮದ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿ ಪರ್ಯಾಯ ಮಹೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸುವಂತೆ ತಮ್ಮೆಲ್ಲರನ್ನು ಶಿರೂರು ಮಠದ ಪರವಾಗಿ ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಯಶ ಪಾಲ್ ಸುವರ್ಣ ಹಾಗುಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here