ಬೆಂಗಳೂರು: ಕೆ ಆರ್ ನಗರದ ಮನೆಗೆಲಸದವಳ ಮೇಲಿನ ಅತ್ಯಾ*ಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅಪರಾಧಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪು ನೀಡಿತ್ತು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದರು. ಇದೀಗ ಶಿಕ್ಷೆ ಪ್ರಮಾಣವನ್ನು ಶನಿವಾರಕ್ಕೆ ನಿಗದಿಪಡಿಸಿದ್ದ ನ್ಯಾಯಾಲಯ ವಾದ ಪ್ರತಿವಾದ ಆಲಿಸಿ ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣ ಘೋಷಿಸಲು ಮುಹೂರ್ತ ಇಟ್ಟಿದೆ .
Home Uncategorized ಅಪರಾಧಿ ಪ್ರಜ್ವಲ್ ರೇವಣ್ಣ ಶಿಕ್ಷೆಗೆ ಕೌಂಟ್‌ಡೌನ್ ಸ್ಟಾರ್ಟ್, ಮಧ್ಯಾಹ್ನ 2.45ಕ್ಕೆ ತೀರ್ಪು ಎಂದ ಕೋರ್ಟ್