ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆ: ಆಟಿದ ಲೇಸು-ಅಭಿನಂದನಾ ಕಾರ್ಯಕ್ರಮ

0
9

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಆ.2 ರಂದು ‘ಆಟಿದ ಲೇಸು’ ಮತ್ತು 2024- 25 ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ‘ಅಭಿನಂದನಾ ಕಾರ್ಯಕ್ರಮ’ ವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಧರ್ಮಸ್ಥಳದ ಶ್ರೀ ಮಂ. ಸ್ವಾಮಿ ಅ. ಹಿ. ಪ್ರಾ. ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರಾದ ಸೋಮಶೇಖರ ಶೆಟ್ಟಿ ಉದ್ಘಾಟಿಸಿ, ಇಂತಹ ಕಾರ್ಯಕ್ರಮದಿಂದ ಹಿಂದಿನ ಕೃಷಿ, ಆಹಾರ, ಸಂಸ್ಕೃತಿ ಹಾಗೂ ಜೀವನ ಕ್ರಮದ ಅರಿವು ಮೂಡುತ್ತದೆ ಎಂದರು. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗುರಿ, ಸಾಧಿಸುವ ಛಲ ಇಟ್ಟುಕೊಂಡು ಕುಟುಂಬ ಮತ್ತು ವಿದ್ಯಾ ಸಂಸ್ಥೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು .

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಮಾತನಾಡಿ ತುಳುನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುವ ಒಳ್ಳೆಯ ಕಾರ್ಯಕ್ರಮ ಇದಾಗಿದೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ನಿವೃತ್ತ ಶಿಕ್ಷಕಿಯಾದ ರಾಜಶ್ರೀ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯಶಿಕ್ಷಕ ಜಯರಾಮ ಮಯ್ಯ ಮಾತನಾಡಿ ತುಳುನಾಡಿನ ಸಂಪ್ರದಾಯ ಪರಂಪರೆಯನ್ನು ಉಳಿಸಿಕೊಂಡು, ಪಾಲಿಸಿಕೊಂಡು ಬರಬೇಕು ಎಂದು ತಿಳಿಸಿದರು. ಉತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳನ್ನು ಮತ್ತು ಶ್ರಮಿಸಿದ ಅಧ್ಯಾಪಕರನ್ನು ಅಭಿನಂದಿಸಿದರು.

ವಿದ್ಯಾರ್ಥಿಗಳು ಅಭಿನಂದನೆಗೆ ಪ್ರತಿಯಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಸಂಯೋಜಕರಾದ ರವಿಚಂದ್ರ ಜೈನ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿ ಸೃಜನ್ಯ ಆಟಿ ತಿಂಗಳ ವಿಶೇಷತೆಯ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ ಕುರ್ಕಿಲ, ಶಿಕ್ಷಕ ವೃಂದದವರು ಮತ್ತು ಶ್ರೇಯಶ್ರಿ ಉಪಸ್ಥಿತರಿದ್ದರು. ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು‌. ಆಶಾ ಸ್ವಾಗತಿಸಿ, ಹೇಮಲತ ವಂದಿಸಿದರು. ರಕ್ಷಾ.ಕೆ ಮತ್ತು ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here