ಬೆಂಗಳೂರು: ಹೈಕೋರ್ಟ್ ಆದೇಶದ ನಡುವೆಯೂ ಸಾರಿಗೆ ನೌಕರರು ಇಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಆ. 5ರ ಸಾರಿಗೆ ನೌಕರರ ಮುಷ್ಕರವನ್ನು ತಡೆಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು.
ನಾಳಿನ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ಆದೇಶದ ನಡುವೆಯೂ ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುವುದಾಗಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಖಚಿತಪಡಿಸಿದ್ದಾರೆ. ಹೀಗಾಗಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಸಾರಿಗೆ ಬಸ್ ರಸ್ತೆಗಳಿಯುವುದಿಲ್ಲ.