ತಣ್ಣೀರುಪಂತ :ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆಗಸ್ಟ್ 04 ರಂದು ತಣ್ಣೀರುಪoತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಪ್ರಜ್ವಲನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಚಾಲನೆಗೊಂಡಿತು.ಈ ಸಮಾರಂಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ ಇವರುಗಳು ಸಂದರ್ಭೋಚಿತವಾಗಿ ಮಾತನಾಡಿ ಅಭಿನಂದನೆ ಸಲ್ಲಿಸಿದರು. ಚುನಾವಣಾ ಉಸ್ತುವಾರಿ ಪ್ರವೀಣ್ ರೈ, ಚುನಾವಣಾ ಪ್ರಭಾರಿ ಪ್ರವೀಣ್ ರೈ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಕರುಣಾಕರ ಸುವರ್ಣ,ತಣ್ಣೀರುಪಂತ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರಿಯ, ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಸುನಿಲ್ ಗೌಡ ಅಣವು, ನಿರ್ದೇಶಕರುಗಳು, ತಣ್ಣೀರುಪoತ, ಕರಾಯ, ಉರುವಾಲು ಗ್ರಾಮ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು, ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು. ಬೊಮ್ಮಾಯ ಬಂಗೇರ ಪ್ರಾರ್ಥನೆ ಸಲ್ಲಿಸಿ, ತಣ್ಣೀರುಪಂತ ಸಿ ಎ ಬ್ಯಾಂಕ್ ಅಧ್ಯಕ್ಷರಾದ ಜಯಾನಂದ ಕಲ್ಲಾಪುರವರು ಪ್ರಾಸ್ತವಿಕ ಮಾತುಗಳನ್ನಾಡಿ ಸ್ವಾಗತಿಸಿದರು, ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.