ಮೂಡಬಿದಿರೆ: ಹೊಸಬೆಳಕು ಸಮಾಜ ಸೇವಾ ಬಳಗ ಪಾಲಡ್ಕ-ಕಡಂದಲೆ-ಕಲ್ಲಮುಡ್ಕೂರು-ಕಾಂತಾವರ ವಲಯ ಇದರ ಪ್ರಥಮ ವಾರ್ಷಿಕೋತ್ಸವ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಘಟಕ ಕಡಂದಲೆ-ಪಾಲಡ್ಕ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಜಂಟಿ ಆಶ್ರಯದಲ್ಲಿ ಕಮ್ಯೂನಿಟಿ ಮೆಡಿಸಿನ್ ವಿಭಾಗ, ಕೆಎಂಸಿ ಮಾಹೆ ಮಣಿಪಾಲ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವು ಕಡಂದಲೆ ಪಾಲಡ್ಕದ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆ. 10ರಂದು ಬೆಳಿಗ್ಗೆ 9-00 ಗಂಟೆಯಿಂದ ನಡೆಯಲಿದೆ.
ಉಚಿತ ಆರೋಗ್ಯ ಶಿಬಿರದ ಉದ್ಘಾಟನೆಯನ್ನು ಕಡಂದಲೆ-ಪಾಲಡ್ಕ ಬಿಲ್ಲವ ಸಂಘದ ಅಧ್ಯಕ್ಷ ಲೀಲಾಧರ ಪೂಜಾರಿ ನೆರವೇರಿಸಲಿದ್ದು, ಹೊಸಬೆಳಕು ಸಮಾಜಸೇವಾ ಸಂಘದ ಉಪಾಧ್ಯಕ್ಷ ಜಯ ಸಿ. ಅಂಚನ್ ಮೈಂದಬೆಟ್ಟು ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಹಲವು ಅತಿಥಿ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ಜರಗಲಿದ್ದು, ಶ್ರೀ ಕ್ಷೇತ್ರ ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕಟೀಲು ಮೇಳದ ಅರ್ಚಕರಾದ ಗುರುಪ್ರಸಾದ್ ಭಟ್ ಉದ್ಘಾಟನೆ ನೆರವೇರಿಸಲಿದ್ದಾರೆ. ಹೊಸ ಬೆಳಕು ಸೇವಾ ಬಳಗದ ಮೋಹನದಾಸ ಅಡ್ಯಂತಾಯ ಅಧ್ಯಕ್ಷತೆ ವಹಿಸಲಿದ್ದು, ಹಲವು ಅತಿಥಿ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.