ಉಡುಪಿ : ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಇಲ್ಲಿನ ಜಿ ಎಸ್ ಬಿ ಮಹಿಳಾ ಮಂಡಳಿಯ ವತಿಯಿಂದ ಆಗಸ್ಟ್ 8ರಂದು ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಶ್ರೀ ಭುವನೇಂದ್ರ ಮಂಟಪದಲ್ಲಿ ನೆಡೆಯಿತು.
ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕರಾದ ದಯಘಾನ್ ಭಟ್ ನೆರವೇರಿಸಿದರು. ಸಾಮೂಹಿಕ ಪ್ರಾರ್ಥನೆ , ಕಳಶ ಪ್ರತಿಷ್ಠೆ , ಸಾಮೂಹಿಕ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮ ಪಠಣ, ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ಆಡಳಿತ ಮಂಡಳಿಯ ಸದಸ್ಯರು, ಮಹಿಳಾ ಮಂಡಳಿಯ ಪದಾಧಿಕಾರಿಗಳು, 500ಕ್ಕೂ ಹೆಚ್ಚಿನ ಮಹಿಳೆಯರು ಉಪಸ್ಥಿತರಿದ್ದರು.

