ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮೀಜಿ ಅವರ 354ನೇ ಆರಾಧನಾ ಮಹೋತ್ಸವವು ಆ.11ರಂದು ಬೆಳಿಗ್ಗೆ ಗಂಟೆ 8.30ರಿಂದ ರಾತ್ರಿ ಗಂಟೆ 9.30ರತನಕ ನಡೆಯಲಿದೆ.
ಅಂದು ಬೆಳಿಗ್ಗೆ ಗಂಟೆ 8.30ಕ್ಕೆ ಗುರುವರ್ಯರ ಪಂಚಲೋಹದ ವಿಗ್ರಹಕ್ಕೆ ಪಂಚಾಮೃತ ಮತ್ತು ಕಲಶಾಭಿಷೇಕ, ಮಧ್ಯಾಹ್ನ ಗಂಟೆ 12.30ಕ್ಕೆ ವಿಶೇಷ ಆರಾಧನಾ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 7.30ಕ್ಕೆ ಭಜನೆ ಆರಂಭಗೊAಡು ರಾತ್ರಿ 9 ಗಂಟೆಗೆ ಮಹಾಪೂಜೆ ನೆರವೇರಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಕೆ.ಎಸ್.ಪಂಡಿತ್ ತಿಳಿಸಿದ್ದಾರೆ.
