ಬೋಸ್ಟನ್: ಅಖಿಲ ಅಮೇರಿಕಾ ತುಳು ಅಸೋಸಿಯೇಶನ್ (AATA)ನ ವತಿಯಿಂದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ಇವರ ಮುಖಾಂತರ, ತುಳುವನ್ನು ಕರ್ನಾಟಕದ ದ್ವಿತೀಯ ಅಧಿಕೃತ ಭಾಷೆಯಾಗಿ ಘೋಷಿಸಲು ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಿತು. ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ತುಳುನಾಡು ಎಂದು ಬದಲಾಯಿಸಲು ಕೂಡ AATA ಮನವಿ ಮಾಡಿತು.
ವರದಿ : ಶ್ರೀವಲ್ಲಿ ರೈ ಮಾರ್ಟೆಲ್

