ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ‘ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕದ ಪ್ರಸಿದ್ಧ ಸಂಸ್ಥೆಯಾದ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡು ‘ತಂಡ ಪ್ರಶಸ್ತಿ’ಯನ್ನು ಪಡೆದುಕೊಂಡಿರುತ್ತಾರೆ.
ಸ್ಪರ್ಧಾಕೂಟದ ಆಯೋಜಕ ವಿನೋದ್ ಶಿವಮೊಗ್ಗ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಉಡುಪಿ ಬುಡೋಕಾನ್ ಕರಾಟೆ ಕರ್ನಾಟಕ ಇದರ ಅಧ್ಯಕ್ಷ ವಾಮನ್ ಪಾಲನ್, ಕಾರ್ಯದರ್ಶಿ ರಘುರಾಜ್ ಪಾಣಿಯಾಡಿ, ಕೋಶಾಧಿಕಾರಿ ಅಶೋಕ್ ಕುಲಾಲ್ ಹಾಗೂ ಸಂಸ್ಥೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.