ವರದಿ :-ಮಂದಾರ ರಾಜೇಶ್ ಭಟ್
ಬೆಂಗಳೂರು: ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಂದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗೆ ಲಭಿಸಿರುವ ಉತ್ತಮ ಬ್ಯಾಂಕ್ ಪ್ರಶಸ್ತಿಯನ್ನು ನಮ್ಮ ಜಿಲ್ಲೆಯ ರೈತರಿಗೆ,ಗ್ರಾಹಕರಿಗೆ ಅರ್ಪಿಸಿಸುವುದಾಗಿ ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥ ಗೌಡರವರು ತಿಳಿಸಿದ್ದಾರೆ.
ಸತತವಾಗಿ ಕಳೆದ ಎರಡು ವರ್ಷಗಳಿಂದ ನಮ್ಮ ಉತ್ತಮ ಬ್ಯಾಂಕ್ ಪ್ರಶಸ್ತಿಯನ್ನು ಪಡೆಯುತ್ತ ಬರುತ್ತಿದೆ. ಬ್ಯಾಂಕ್ ನ ಉತ್ತಮವಾದ ಸರ್ವಾಂಗೀಣ ನಿರ್ವಹಣೆಗಾಗಿ ಈ ಪ್ರಶಸ್ತಿ ನಮ್ಮ ಬ್ಯಾಂಕಿಗೆ ಸಂದಿರುವುದು ಸಂತಸ ತಂದಿದೆ. ಇದಕ್ಕಾಗಿ ನಮ್ಮ ಆಡಳಿತ ಮಂಡಳಿ, ದಕ್ಷತೆಯಿಂದ ಸೇವೆ ಸಲ್ಲಿಸಿದ ಬ್ಯಾಂಕಿನ ಸಿಬ್ಬಂದಿಗಳಿಗೆ, ಪ್ರಾಥಮಿಕ ಕೃಷಿ ಪತ್ತಿನ ವ್ಯವಸಾಯ ಸಹಕಾರ ಸಂಘಗಳು, ನಮ್ಮ ಬ್ಯಾಂಕಿನ ಸದಸ್ಯ ಸಹಕಾರಿ ಸಂಸ್ಥೆಗಳಿಗೆ ಈ ಸಂದರ್ಭದಲ್ಲಿ ಅಭಿನಂದನಗೆಳನ್ನು ಹಾಗೂ ಕೃತಜ್ಞತೆಗಳನ್ನು ಸಲ್ಲಿಸಿದರು, ಈ ಸಂದರ್ಭದಲ್ಲಿ ಬ್ಯಾಂಕಿನನ ಮುಖ್ಯ ಕಾರ್ಯನಿರ್ವಾಹಕ ಸಿ.ರಾಜಣ್ಣ ರೆಡ್ಡಿ ಅವರು ಉಪಸ್ಥಿತರಿದ್ದರು.

