
ಮೂಡುಬಿದಿರೆ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆಯ ಆಶ್ರಯದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಪಂಜಿನ ಮರವಣಿಗೆ ಮೂಡುಬಿದಿರೆ ಸಾವಿರ ಕಂಬದ ಬಸದಿಯಿಂದ ಸಮಾಜಮಂದಿರದವರೆಗೆ ಗುರುವಾರ ರಾತ್ರಿ ನಡೆಯಿತು.

ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಹಿಂದೂ ಸಂಘಟನೆ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು.

