ಸ.ಪ.ಪೂ.ಕಾಲೇಜು ಸಜೀಪಮೂಡ; ಸ್ವಾತಂತ್ರ್ಯೋತ್ಸವ

0
107

ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡ ಇಲ್ಲಿ 79ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್. ಎಸ್ ಜೈ ರಾಬಿ ವಹಿಸಿ ಸ್ವಾತಂತ್ರ ಸಂಗ್ರಾಮದ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ ಶುಭ ಹಾರೈಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ. ಸುಬ್ರಮಣ್ಯ ಭಟ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಹಾಗೂ ದೇಶಪ್ರೇಮವನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು. ಇತಿಹಾಸ ಉಪನ್ಯಾಸಕ ಬಾಲಕೃಷ್ಣ ಎಂ.ವಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕಿ ಭಾರತಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಸುರೇಶ್ ಬಿ. ಐತಾಳ್ ಸರ್ವರನ್ನು ಸ್ವಾಗತಿಸಿದರು, ಉಪನ್ಯಾಸಕಿ ಸುಂದರಿ ಬಹುಮಾನ ವಿಜೇತರ ಪಟ್ಟಿ ಓದಿದರು. ಉಪನ್ಯಾಸಕಿ ಗಾಯತ್ರಿ ವಂದನಾರ್ಪಣೆಗೈದರು. ಉಪನ್ಯಾಸಕ ಬಾಲಕೃಷ್ಣ ನಾಯಕ ಉಪನ್ಯಾಸಕಿ ಶೋಭ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here