ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0
40

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ವೀರ ಸೇನಾನಿಗಳನ್ನು ಸ್ಮರಿಸಿದರು.

ಉಡುಪಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ CHSC ಯೋಜನಾಧಿಕಾರಿ ಹರೀಶ್, ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಜಯಂತ್, ತಾಲೂಕು ಯೋಜನಾ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here