ಕಣ್ಣೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢಶಾಲೆ ಕಣ್ಣೂರು ಇದರ ನೇತೃತ್ವದಲ್ಲಿ, 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಬಹುಮಾನ ವಿತರಣೆ ನಡೆಸಲಾಯಿತು. ಕೆನರಾಬ್ಯಾಂಕ್ ಹಲವಾರು ವರುಷಗಳಿಂದ ದೇಶಾದ್ಯಂತ ನಡೆಸಿಕೊಂಡು ಬರುತ್ತಿರುವ ಕೆನರಾ ವಿದ್ಯಾ ಜ್ಯೋತಿ ಕಾರ್ಯಕ್ರಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಶಾಲೆಯ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಕೆನರಾ ಬ್ಯಾಂಕಿನ ವ್ಯವಸ್ಥಾಪಕರಾದ ರಂಜಿತ್ ರವರು ಹಾಗೂ ಅಧಿಕಾರಿ ಅನೂಪ್ ರವರು ವಿತರಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಪ್ರಾಂಶುಪಾಲರಾದ ಜಗದೀಶ್ ಹಾಗೂ ಪ್ರಾಥಮಿಕ ಶಾಲೆಯ ಪ್ರಾಂಶುಪಾಲರಾದ ಸುಶೀಲ ರವರು ಕೆನರಾ ಬ್ಯಾಂಕಿನ ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಸದಸ್ಯರು, ಅದ್ಯಾಪಕ ವೃಂದ, ಹಳೆವಿದ್ಯಾರ್ಥಿಗಳು ಹಾಜರಿದ್ದರು.