ಮಡಿಕೇರಿ: ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಕೈಬಿಟ್ಟ ರಾಜ್ಯ ಸರ್ಕಾರ

0
210

ಕೊಡಗು: ಮಡಿಕೇರಿ ನಗರದ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್  ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇತ್ತೀಚೆಗೆ ರಾಜಾಸೀಟ್‌ನಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಗಾಜಿನ ಸೇತುವೆ  ಮತ್ತು ಫುಡ್ ಕೋರ್ಟ್ ನಿರ್ಮಾಣ ಯೋಜನೆಗೆ ತೋಟಗಾರಿಕೆ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದಕ್ಕೆ ಜನರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಸರ್ಕಾರ ಆ ಯೋಜನೆಯನ್ನು ಹಿಂಪಡೆದಿದೆ.

ರಾಜಾಸೀಟ್​ನಲ್ಲಿ ಗ್ಲಾಸ್ ಬ್ರಿಡ್ಜ್ ಮಾಡುವುದಿಲ್ಲ ಎಂದ ಶಾಸಕ ಮಂತರ್ ಗೌಡ 

ಇನ್ನು ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಮಾಹಿತಿ ನೀಡಿದ್ದು, ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ರಾಜ್ಯ ಸರ್ಕಾರ ಹಿಂಪಡೆದಿದೆ. ಗ್ಲಾಸ್ ಬ್ರಿಡ್ಜ್​​ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಅಪಾಯವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಯೋಜನೆ ರದ್ದು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೋಟ್ಯಂತರ ರೂ. ವೆಚ್ಚದಲ್ಲಿ ಯೋಜನೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು. ಯೋಜನೆಯ ಅಪಾಯಗಳ ಬಗ್ಗೆ ಟಿವಿ9 ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತದಿಂದ ಯೋಜನೆ ರದ್ದು ಮಾಡಲಾಗಿದೆ.

ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ ಕರೆಯುವ ಮೊದಲು ಅಲ್ಲಿಗೆ ಭೂ ವಿಜ್ಞಾನಿಗಳನ್ನ, ಪರಿಸರ ಇಲಾಖೆ ತಜ್ಞರನ್ನ ಕರೆಸಿ ವಿವಿಧ ಪರೀಕ್ಷೆಗಳನ್ನು ಮಾಡಬೇಕಿತ್ತು. ಗ್ಲಾಸ್ ಬ್ರಿಡ್ಜ್ ನಿರ್ಮಾಣ ಮಾಡಲು ಈ ಜಾಗ ಸುರಕ್ಷಿತವಾಗಿದೆ ಎಂಬ ಫೀಸಿಬಿಲಿಟಿ ಚೆಕ್ ಮಾಡಬೇಕಿತ್ತು. ಆದರೆ ಯಾವುದನ್ನೂ ಮಾಡದೆ ತೋಟಗಾರಿಕಾ ಇಲಾಖೆ ಟೆಂಡರ್​ ಆಹ್ವಾನಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

LEAVE A REPLY

Please enter your comment!
Please enter your name here