ಪಾವಂಜೆ: ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಸಾಧನೆ ಅನನ್ಯ; ಸತೀಶ್ ಭಟ್

0
158

ಮುಲ್ಕಿ: ಪಾವಂಜೆ ಶಿವಳ್ಳಿ ಸಭಾದವರಿಂದ ಆಟಿಡೊಂಜಿ ದಿನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಪಾವಂಜೆಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪಾವಂಜೆ ಶಿವಳ್ಳಿ ಸಭಾದ ಅಧ್ಯಕ್ಷ ಸತೀಶ್ ಭಟ್ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಸಾಧನೆ ಅನನ್ಯವಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡುವ ಮೂಲಕ ಸಾಧಕರಾಗಬೇಕಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಸಭಾದ ಉಪಾಧ್ಯಕ್ಷೆ ಸುಧಾಮಣಿ, ಕಾರ್ಯದರ್ಶಿ ಪ್ರಸನ್ನ ಕುಮಾರ್ ಹಾಗೂ ಮಾಧ್ಯಮ ಪ್ರತಿನಿಧಿ ಮೋಹನಕುಮಾರ್ ಪಾವಂಜೆ ಉಪಸ್ಥಿತರಿದ್ದರು.
ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಶೇಕಡಾ 90% ಕ್ಕಿಂತ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಶ್ರೀವಿದ್ಯಾ ಪಿ. ರಾವ್ ನಿರೂಪಿಸಿದರು.

LEAVE A REPLY

Please enter your comment!
Please enter your name here