ವೇಣೂರು: ಕರಿಮಣೇಲು ಗ್ರಾಮದ ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಯಾಗಿದ್ದು, ಸಮಿತಿಗೆ ನೂತನ ಅಧ್ಯಕ್ಷರಾಗಿ ಉದ್ಯಮಿ, ಯುವ ನಾಯಕ ಸತೀಶ್ ಚಿಗುರು ಆಯ್ಕೆಯಾಗಿದ್ದಾರೆ.
ಲಯನ್ಸ್ ಕ್ಲಬ್ ವೇಣೂರು ಇದರ ಕೋಶಾಧಿಕಾರಿಯಾಗಿದ್ದು, ಈ ಬಾರಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಮಾತ್ರವಲ್ಲದೆ ಧಾರ್ಮಿಕವಾಗಿ, ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು. ದೇಗುಲದಲ್ಲಿ ಆ. 27ರಿಂದ 29ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೈಭವದಿಂದ ಜರಗಲಿದೆ.

