ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆ: ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

0
110

ಬೆಳ್ತಂಗಡಿ: ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು.

ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ಇವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್. ಎನ್. ಕಾಕತ್ಕರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರವೀಕ್ಷಣಾಧಿಕಾರಿ ಸುಜಯ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಖಿಲ್ ಕುಮಾರ್, ಇಂಡಿಯನ್ ಕರಾಟೆ ಅಸೋಸಿಯೇಷನ್ ತೀರ್ಪುಗಾರರಾದ ಅಶೋಕ್ ಆಚಾರ್ಯ, ಬೆಳಾಲು ಪ್ರೌಢಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ್ ಉಪಸ್ಥಿತರಿದ್ದರು.
52 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಕು‌. ಜಾಹ್ನವಿ ಪ್ರಥಮ ಸ್ಥಾನ ಗಳಿಸಿ ದ. ಕ. ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಕ್ರೀಡಾಕೂಟವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಕೃಷ್ಣಾನಂದ ರಾವ್ ಸಂಘಟಿಸಿದರು.

ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕರಾದ ಕಿರಣ್ ವಂದಿಸಿದರು. ಸುಮನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here