ಮೂಡುಬಿದಿರೆ: ತಮ್ಮ ಅಧಿಕಾರಾವಧಿ, ಆ ಬಳಿಕವೂ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಮಾಜಿ ಸಚಿವ ದಿ.ಕೆ.ಅಮರನಾಥ ಶೆಟ್ಟಿ ಹೆಸರಿನಲ್ಲಿ ಸಮಾಜ ಸೇವೆಗೋಸ್ಕರ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ್ದು, ಅದರ ಉದ್ಘಾಟನೆಯು ಆ.24ರಂದು ಬೆಳಗ್ಗೆ 9.45ಕ್ಕೆ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಕೆ.ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ಡಾ.ಅಮರಶ್ರೀ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಹಿಳೆಯರು, ಅಶಕ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ಸಂಸ್ಥೆ ಸ್ಥಾಪಿಸಲಾಗಿದ್ದು, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಆರೋಗ್ಯ ಶಿಬಿರ, ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮವನ್ನು ಮಾಡಿದ್ದೇವೆ. ಮುಂದೆ ಹಲವಾರು ಯೋಜನೆಗಳನ್ನು ಮಾಡಿದ್ದೇವೆ ಎಂದರು.
ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ನಿಟ್ಟೆ ವಿವಿ ಕುಲಪತಿ ಡಾ.ಶಾಂತರಾಮ್ ಶೆಟ್ಟಿ ಟ್ರಸ್ಟ್ ಉದ್ಘಾಟಿಸುವರು. ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಆಳ್ವಾಸ್ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಕುದ್ರೋಳಿ ಗೋಕರರ್ಣಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ರಾಮಯ್ಯ, ಚೌಟರ ಅರಮನೆಯ ಕುಲದೀಪ ಎಂ., ಅದಾನಿ ಗ್ರೂಪ್ಸ್ ಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಕೆ.ಶ್ರೀಪತಿ ಭಟ್, ಲಕ್ಷ್ಮಿ ಮೆಮೋರಿಯಲ್ ಎಜ್ಯುಕೇಶನತ ಸೊಸೈಟಿ ಉಪಾಧ್ಯಜ್ಷ ಪ್ರಶಾಂತ್ ಶೆಟ್ಟಿ ಉಪಸ್ಥಿತರರಿರುವರು ಎಂದರು.
ಟ್ರಸ್ಟಿಗಳಾದ ಜಯಶ್ರೀ ಅಮರನಾಥ ಶೆಟ್ಟಿ, ಆಶ್ರಿತಾ ಪಿ.ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.