ಪುತ್ತೂರು:ಎರುಂಬು ಶ್ರೀ ವಿಷ್ಣುಮಂಗಲ ದೇವಸ್ಥಾನ ವಠಾರದಲ್ಲಿ ಸ್ವಾತಂತ್ರ್ಯೋತ್ಸವ ಕವಿಗೋಷ್ಠಿ-2025

0
46

ಪುತ್ತೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು(ರಿ) ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ,
ಸ್ವಾತಂತ್ರ್ಯೋತ್ಸವ ಕವಿಗೋಷ್ಠಿ -2025 ದಿನಾಂಕ:23.8.2025ರಂದು ಶ್ರೀವಿಷ್ಣುಮಂಗಲ ದೇವಸ್ಥಾನ ವಠಾರ ಎರುಂಬು ಅಳಿಕೆ ಇಲ್ಲಿ ನಡೆಯಲಿದೆ.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ)ಬಂಟ್ವಾಳ ಇದರ ಗೌರವಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಕಾರಂತ್ ಎರುಂಬು ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್ ಉದ್ಘಾಟಿಸಲಿರುವರು.ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಳಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಪೂಜಾರಿ ಸಣ್ಣಗುತ್ತು, ಕನ್ನಡ ಸಾಹಿತ್ಯ ಪರಿಷತ್ತು ವಿಟ್ಲ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀ ಗಣೇಶ ಪ್ರಸಾದ ಪಾಂಡೇಲು,ಮಕ್ಕಳ ಕಲಾ ಲೋಕ ಬಂಟ್ವಾಳ ಇದರ ಅಧ್ಯಕ್ಷರಾದ ಶ್ರೀ ರಮೇಶ್ ಬಾಯಾರು, ಪ್ರಗತಿ ಎಜುಕೇಶನಲ್ ಫೌಂಡೇಶನ್ (ರಿ)ಪುತ್ತೂರು ಸ್ಥಾಪಕಾಧ್ಯಕ್ಷರಾದ ಶ್ರೀ ಗೋಕುಲ್ ನಾಥ್ ಪಿ ವಿ,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ)ಬಂಟ್ವಾಳ ತಾಲೂಕು ಅಧ್ಯಕ್ಷರಾದ ಶ್ರೀಕಲಾ ಕಾರಂತ್ ಅಳಿಕೆ ಭಾಗವಹಿಸಲಿದ್ದಾರೆ.
ಸ್ವಾತಂತ್ರ್ಯೋತ್ಸವ ಕವಿಗೋಷ್ಠಿ-2025 ರ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢ ಶಾಲೆ ನಾರ್ಶ ಮೈದಾನ ಮುಖ್ಯ ಗುರು, ರಾಷ್ಟ್ರೀಯ ತರಬೇತುದಾರರು, ಸಂಪನ್ಮೂಲ ವ್ಯಕ್ತಿಯೂ ಆಗಿರುವ ಶ್ರೀ ಗೋಪಾಲಕೃಷ್ಣ ನೇರಳಕಟ್ಟೆ ವಹಿಸಲಿದ್ದು, ಆಮಂತ್ರಣ ಪರಿವಾರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ವಿಂಧ್ಯಾ ಎಸ್ ರೈ ಕವಿಗೋಷ್ಠಿ ಗೆ ಚಾಲನೆ ನೀಡಲಿರುವರು.ಸುಮಾರು 50 ಕವಿಗಳು ಭಾಗವಹಿಸಲಿರುವರೆಂದು ಚಿಗುರೆಲೆ ಸಾಹಿತ್ಯ ಬಳಗದ ಕಾರ್ಯಕ್ರಮ ಸಂಯೋಜಕರಾದ ಶ್ರೀ ನಾರಾಯಣ ಕುಂಬ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here