ಉಡುಪಿ: ಬಿಜೆಪಿ ರಾಷ್ಟ್ರೀಯ ಮುಖಂಡ ಬಿ.ಎಲ್ ಸಂತೋಷ್ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ಮಹೇಶ್ ಶೆಟ್ಟಿ ವಿರುದ್ಧ ದ್ವೇಷ ಭಾಷಣದ ಪ್ರಕರಣ ದಾಖಲಾಗಿತ್ತು. ಸಂತೋಷ್ ವಿರುದ್ಧ ತಿಮರೋಡಿ ಅವಹೇಳನಕರಿಯಾಗಿ ಮಾತನಾಡಿದ್ದು ಸಾಕಷ್ಟು ವೈರಲ್ ಆಗಿತ್ತು. ಈ ಬಗ್ಗೆ ಬಿಜೆಪಿ ಮುಖಂಡರು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಬ್ರಹ್ಮಾವರ ಪೊಲೀಸರು ತಿಮರೋಡಿಯವರನ್ನು ಬಂಧಿಸಿರುವ ಬಗ್ಗೆ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಖಚಿತಪಡಿಸಿದ್ದಾರೆ.

