ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ
ಡಾ. ರಾಮಕೃಷ್ಣ ಶಿರೂರು ಅವರು ಜನಸಿರಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ಕರ್ನಾಟಕ ರಾಜ್ಯ ಜನಸಿರಿ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಶ್ರೀ ನಾಗಲೇಖ ಅವರು ಪತ್ರಿಕೆ ತಿಳಿಸಿರುತ್ತಾರೆ.
2025 ಅಗಸ್ಟ್ 31 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿರುತ್ತಾರೆ.
ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.
1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,
1995 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಅವರು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ
ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿ ಡಾ.ರಾಮಕೃಷ್ಣ ಶಿರೂರು ಅವರಿಗೆ ಕರ್ನಾಟಕ ರಾಜ್ಯ ಜನ ಸಿರಿ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷರಾದ ಶ್ರೀ ನಾಗ ಲೇಖ ಅವರು ಅಭಿನಂದನೆ ಸಲ್ಲಿಸಿರುತ್ತಾರೆ.

