ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವತಿಯಿಂದ ಕಲಾವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ವಾರ್ಷಿಕ ಪರೀಕ್ಷೆಯ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಯುಕ್ತಶ್ರೀ ಪಿ. ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಇವರು ೨೦೨೪-೨೫ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ೫೯೩ ಅಂಕಗಳೊಂದಿಗೆ ರಾಜ್ಯಕ್ಕೆ ೫ ನೇ ರಾಂಕ್ ಗಳಿಸಿದ್ದರು.
ಇತಿಹಾಸ ವಿಭಾಗದ ಉಪನ್ಯಾಸಕಿ ಕು. ಸವಿತಾ ಉಪಸ್ಥಿತರಿದ್ದರು. ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಗಿಯಾದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾ ಸಂಘದ ಸಂಯೋಜಕರಾದ ಮೊನಿಷಾ ಎನ್. ಕಾರ್ಯಕ್ರಮವನ್ನು ನಡೆಸಿಕೊಟ್ಟರು.

