ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಖಂಡನೆ; ಮದ್ದೂರು ಸಂಪೂರ್ಣ ಬಂದ್

0
116

ಮಂಡ್ಯ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಇಂದು ವಿವಿಧ ಸಂಘಟನೆಗಳು ಮಂಡ್ಯ ಜಿಲ್ಲೆಯ ಮದ್ದೂರು ಬಂದ್ ಗೆ ಕರೆ ನೀಡಿವೆ.

ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ, ಹಿಂದೂ ರಕ್ಷಣಾ ಸಮಿತಿಯಿಂದ ಮದ್ದೂರು ಬಂದ್ ಗೆ ಕರೆ ನೀಡಲಾಗಿದ್ದು, ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ವ್ಯಾಪಕ ಬೆಂಬಲ ಸೂಚಿಸಿದ್ದಾರೆ. ನರಸಿಂಹಸ್ವಾಮಿ ದೇವಸ್ಥಾನದಿಂದ ಹಿಂದೂ ಸಂಘಟನೆಗಳ ಬೃಹತ್ ರ್ಯಾಲಿ ನಡೆಯಲಿದೆ. ಮಂಜುನಾಥ ಸ್ವಾಮಿಯ ಪವಿತ್ರಾ ಕ್ಷೇತ್ರವಾದ ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುತ್ತಿರುವವರನ್ನು ಗಡಿಪಾರು ಮಾಡಬೇಕು. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ದೂರು ಬಂದ್ ಮಾಡಲಾಗಿದೆ. ಇನ್ನು ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

LEAVE A REPLY

Please enter your comment!
Please enter your name here