ಉಡುಪಿ: ಜಿಲ್ಲೆಯಾದ್ಯಂತ ಪರಿಸರ ಜಾಗೃತಿಗಾಗಿ 1 ಲಕ್ಷ ಗಿಡನೆಡುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ನಡೆದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜನರು ವಿಶ್ವಾಸವಿಟ್ಟು ನಮ್ಮ ಸಂಸ್ಥೆಗಳಲ್ಲಿ ಉಳಿತಾಯ ಠೇವಣಿ ಇಟ್ಟಿದ್ದಾರೆ. ಇದನ್ನು ಸಮರ್ಪಕವಾಗಿ ವಿನಿಯೋಗಿಸಬೇಕು. ಸಂಸ್ಥೆಗಳು ಬೆಳೆಯಬೇಕು ಎಂಬ ನಿಟ್ಟಿನಲ್ಲಿ ಸಹಕಾರ ಯೂನಿಯನ್ ಮೂಲಕ ಜಿಲ್ಲೆಯಲ್ಲಿ ನಿರಂತರ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಯೂನಿಯನ್ ಆಡಳಿತ ಮಂಡಳಿ ಸದಸ್ಯರಾದ ಗಂಗಾಧರ ಶೆಟ್ಟಿ, ಶ್ರೀಧರ ಪಿ.ಎಸ್., ಸುಧೀರ್ ವೈ, ಅನಿಲ್ ಪೂಜಾರಿ, ಪ್ರಸಾದ್ ಶೆಟ್ಟಿ, ಮಂಜಯ್ಯ ಶೆಟ್ಟಿ, ಅರುಣ್ ಕುಮಾರ್ ಹೆಗ್ಡೆ, ಕರುಣಾಕರ ಶೆಟ್ಟಿ, ಸುರೇಶ್ ರಾವ್, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಸಹಕಾರಿ ಇಲಾಖೆ ಅಧೀಕ್ಷಕ ಎಂ.ಜೆ. ಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು. ಯೂನಿಯನ್ ಸಿಇಒ ಅನುಷಾ ಕೋಟ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.