ಬಂಟ್ವಾಳ ತಾಲ್ಲೂಕಿನ ಲೊರೆಟ್ಟೋಹಿಲ್ಸ್ ರೋಟರಿ ಕ್ಲಬ್ ವತಿಯಿಂದ ದೈಹಿಕ ಶಿಕ್ಷಣ ನಿರ್ದೇಶಕ ಜಯರಾಮ್ ಕೊಯಿಲ ಇವರನ್ನು ಬುಧವಾರ ಸನ್ಮಾನಿಸಲಾಯಿತು. ರೋಟರಿ ಜಿಲ್ಲಾ ಮುಖಂಡ ಡಾ.ಶಿವಪ್ರಸಾದ್, ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್, ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ವಲಯ ಸೇವಾನಿ ರಾಮಚಂದ್ರ ಶೆಟ್ಟಿಗಾರ್, ನಿಕಟಪೂರ್ವ ಅಧ್ಯಕ್ಷ ಸುರೇಶ ಶೆಟ್ಟಿ, ಕೋಶಾಧಿಕಾರಿ ಅರುಣ್ ಮಾಡ್ತಾ ಮತ್ತಿತರರು ಇದ್ದರು.