ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ವಾಹನ ಜಾಥಾ
ತೀರ್ಥಹಳ್ಳಿ: ಮಾಜಿ ಸಚಿವ, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಇಂದು (ಆ.23) ಧರ್ಮ ರಕ್ಷಾಣಾ ಯಾತ್ರೆ ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ವಾಹನ ಜಾಥಾ ನಡೆಯಲಿದೆ.
ಬೆಳಿಗ್ಗೆ 6 ಗಂಟೆಗೆ ಜಾಥಾಕ್ಕೆ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಚಾಲನೆ ದೊರೆಯಲಿದ್ದು, ಸಾವಿರಾರು ಮಂದಿ ತಮ್ಮ ವಾಹನಗಳಲ್ಲಿ ಆಗಮಿಸುವ ನಿರೀಕ್ಷೆ ಇದೆ.