ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ದೂರು ವಿಚಾರವಾಗಿ ಇದೀಗ ಎಸ್‌ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ
ತಲೆಬುರುಡೆ ತಂದ ಕೇಸ್ನಲ್ಲಿ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಮಾಸ್ಕ್ಮ್ಯಾನ್ ನನ್ನ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.
ಇನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್ಮ್ಯಾನ್ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯಲಿದೆ. ಬಳಿಕ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು ಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ SIT ಮನವಿ ಮಾಡಲಿದ್ದು, ಆ ಮೂಲಕ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ.