ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರಂಭ-2025 ಕಾರ್ಯಕ್ರಮ ಉದ್ಘಾಟನೆ

0
55

ಕುಂದಾಪುರ:ಬಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರಂಭ 2025,ಫ್ರೆಶರ್ಸ್ ಡೇ ಕಾರ್ಯಕ್ರಮ ಅದ್ದೂರಿಯಾಗಿ ಶನಿವಾರ ನಡೆಯಿತು.ಮೊದಲ ಬ್ಯಾಚಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಯಕ್ಷಗಾನ,ಭರತ ನಾಟ್ಯ,ನೃತ್ಯ,ಫ್ಯಾಷನ್ ಶೋ ಕಾರ್ಯಕ್ರಮ ನೊಡುಗರ ಮನ ಸೆಳೆಯಿತು.ಕಾಲೇಜಿನ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಫಿಶರೀಸ್ ಕಾಲೇಜು ಮಂಗಳೂರು ಡಾ.ಎಸ್.ಎಂ ಶಿವಪ್ರಕಾಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ತನ್ನ ವಿಭಿನ್ನ ಕಾರ್ಯ ಚಟುವಟಿಕೆ ಮೂಲಕ ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆ ಜಿಲ್ಲೆಯಲ್ಲಿ ಉತ್ತಮ ಹೆಸರನ್ನು ಗಳಿಸಿದೆ.ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವುದರ ಜತೆಗೆ,ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಿ ಅವರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಹಕಾರ ನೀಡುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು.

ಸರಿಗಮಪ ವಿನ್ನರ್ ಗಗನ್ ಗಾಂವ್ಕರ್ ಮಾತನಾಡಿ,ಸ್ಪರ್ಧಾತ್ಮಕ ಯುವಗದಲ್ಲಿ ತಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯ ಬೇಕೆಂದು ಹೇಳಿದರು.

ಕಾಲೇಜಿನ ನಿರ್ದೇಶಕಿ ಮಮತಾ ಶುಭ ಹಾರೈಸಿದ್ದರು.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆ ಶಿಸ್ತಿಗೆ ಹೆಚ್ಚಿನ ಒತ್ತನ್ನು ನೀಡುತ್ತಾ ಬಂದಿದೆ.
ನಮ್ಮ ಕಾಲೇಜಿನಲ್ಲಿ ವಿದ್ಯಾರ್ಜನೆ ಮಾಡಿರುವ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರ್ಯಾಂಕ್ ಗಳಿಸುವುದರ ಮುಖೇನ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.
ಉನ್ನತ ಹುದ್ದೆಗಳನ್ನು ಪಡೆದು ತಮ್ಮ ಕುಟುಂಬದವರೊಂದಿಗೆ ನೆಮ್ಮದಿ ಜೀವನವನ್ನು ನಡೆಸುತ್ತಿರುವುದು ಕಾಲೇಜು ಸ್ಥಾಪನೆ ಮಾಡಿರುವುದು ಸಾರ್ಥಕತೆ ಕಂಡಿದೆ ಎಂದು ಹೇಳಿದರು.ಶಿಕ್ಷಣ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎನ್ನುವ ಉದ್ದೇಶದಿಂದ ಮೊದಲ ಬ್ಯಾಚಿನ ವಿದ್ಯಾರ್ಥಿಗಳಿಗಾಗಿ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಕಾಂತ,ಪ್ರಿನ್ಸಿಪಾಲ್ ಡಾ.ಸೀಮಾ ಜಿ ಭಟ್,ವೈಸ್ ಪ್ರಿನ್ಸಿಪಾಲ್ ಸುಜಾತಾ, ಸಾಂಸ್ಕೃತಿಕ ಸಂಚಾಲಕಿ ರಝೀಕಾ,ಬೋಧಕ,
ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here