ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.
ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಾಯಂಕಾಲ 4ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ನಾಗೇಶ್ ಎನ್ಎ, ಇನ್ನು ಈ ರೀತಿಯ ಹೇಳಿಕೆ ನೀಡಬಾರದು ಎಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.