ಉಡುಪಿ-ದ.ಕ. ಜಿಲ್ಲೆಗೆ ಇಂದು ರೆಡ್ ಅಲರ್ಟ್, ಶಾಲಾ-ಕಾಲೇಜಿಗೆ ರಜೆ ಘೋಷಿಸಿದ ಡಿ.ಸಿ.

0
71

ಬೆಂಗಳೂರು: ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯ ದಿನದಿಂದಲೇ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ನೀಡಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಾಹಪುರ, ಕೂಡಲಸಂಗಮ, ಕೆಂಭಾವಿ, ಕಮ್ಮರಡಿ, ಗೋಕರ್ಣ, ಭಾಗಮಂಡಲ, ಶೃಂಗೇರಿ, ಶೋರಾಪುರ, ಮುಲ್ಕಿ, ಮುದ್ದೇಬಿಹಾಳ, ಮಂಗಳೂರು, ಕಕ್ಕೇರಿ, ಹುಣಸಗಿ, ಹುಂಚದಕಟ್ಟೆ, ಶೋರಾಪುರ, ಭಾಲ್ಕಿ, ಬೆಳ್ತಂಗಡಿ, ಯಲ್ಲಾಪುರ, ದೇವರಹಿಪ್ಪರಗಿ, ಚಿತ್ತಾಪುರ, ಸೋಮವಾರಪೇಟೆ, ಸೇಡಂ, ಮಾನ್ವಿ, ಕಮಲಾಪುರ, ಹುನಗುಂದ, ಕೊಪ್ಪ, ಬಾದಾಮಿ, ವಿಜಯಪುರ, ಹೊಸಪೇಟೆ, ನರಗುಂದ, ನಾಪೊಕ್ಲು, ರಾಯಚೂರು, ಸೈದಾಪುರ, ಆನವಟ್ಟಿ, ಕುಷ್ಟಗಿ, ನೆಲೋಗಿ, ಕೋಲಾರ, ಕುಶಾಲನಗರ, ಮಸ್ಕಿ, ಹಗರಿಬೊಮ್ಮನಹಳ್ಳಿ, ಚಿಂಚೋಳಿ, ಚಿತ್ರದುರ್ಗ, ಭರಮಸಾಗರ, ಭದ್ರಾವತಿ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಬಹುತೇಕ ಕಡೆ ಬುಧವಾರ ಸಂಜೆ ಭಾರಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

LEAVE A REPLY

Please enter your comment!
Please enter your name here