ಮಲ್ಪೆ: ಮುಂಜಾನೆ ಮಗುಚಿ ಬಿದ್ದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ

0
53

ಉಡುಪಿ: ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಇಂದು ಮುಂಜಾನೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರನ್ನು ಮುಳುಗು ತಜ್ಞರು ರಕ್ಷಿಸಿದ್ದಾರೆ.

ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯ ಯೋಗೇಶ್ ಈ ಬಗ್ಗೆ ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಅವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ವರು ಮೀನುಗಾರರ ಜೀವ ರಕ್ಷಿಸಲಾಗಿದೆ.

ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಡಲು ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಈಜು ಬರುತ್ತದೆ ಎಂದು ಹೇಳಿ ಯಾರೂ ಸಹ ನೀರಿಗೆ ಇಳಿಯಬೇಡಿ. ಯಾವ ಕ್ಷಣದಲ್ಲೂ ಅಲೆಗಳು ಮೇಲುಕ್ಕಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಎಲ್ಲಾ ಮೀನುಗಾರರು ಲೈಫ್ ಜಾಕೇಟ್ ಹಾಕಿಯೇ ಮೀನುಗಾರಿಕೆಗೆ ಹೋಗಿ ಎಂದು ಈಶ್ವ‌ರ್ ಮಲ್ಪೆ ವಿನಂತಿಸಿದ್ದಾರೆ .

LEAVE A REPLY

Please enter your comment!
Please enter your name here