ರಾಯಚೂರಿನ ಬೆಳಕು ಸಾಹಿತ್ಯಿಕ ಸಾಂಸ್ಕೃತಿಕ ಟ್ರಸ್ಟ್ ನವರು ನೀಡುವ ದ.ರಾ. ಬೇಂದ್ರೆ ರಾಷ್ಟ್ರಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳಿಗಾಗಿ ಖ್ಯಾತ ಯುವಕವಿ ಎಂ.ಎ. ಮುಸ್ತಫಾ ಬೆಳ್ಳಾರೆಯವರು ಆಯ್ಕೆಯಾಗಿದ್ದಾರೆ. ಸೆ 21 ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನ ನಡೆಯಲಿದ್ದು ಇಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.