ಮುಲ್ಕಿ: ಹಿರಿಯರ ಆದರ್ಶಗಳನ್ನು ನೆನಪಿಸಿಕೊಳ್ಳುವುದು ಅಧ್ಯ ಕರ್ತವ್ಯ- ಅಭಯ ಚಂದ್ರ ಜೈನ್

0
123


ಸಾರ್ವಜನಿಕ ಗಣೇಶೋತ್ಸವದ ಸ್ಥಾಪಕ ಸದಸ್ಯರುಗಳಿಗೆ ಗೌರವಾರ್ಪಣೆ
ಮುಲ್ಕಿ: ಸುವರ್ಣ ಸಂಭ್ರಮ ಆಚರಿಸುತ್ತಿರುವ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ಗಣೇಶೋತ್ಸವದ ವೇದಿಕೆಯಲ್ಲಿ ನಡೆಯಿತು
ಮುಖ್ಯ ಅತಿಥಿಗಳಾಗಿ ಮಾಜೀ ಸಚಿವ ಅಭಯ ಚಂದ್ರ ಜೈನ್ ಮಾತನಾಡಿ ಕಷ್ಟಕಾಲದಲ್ಲಿ ಗಣೇಶೋತ್ಸವದಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿ ಊರಿಗೆ ಮಾದರಿಯಾದ ಹಿರಿಯರನ್ನು ನೆನಪಿಸಿಕೊಂಡು ಗೌರವಿಸುವುದು, ಆದ್ಯ ಕರ್ತವ್ಯವಾಗಿದ್ದು ಸಂಘಟನೆಯಲ್ಲಿ ಬಲವಿದೆ ಎಂದರು.
ವೇದಿಕೆಯಲ್ಲಿ ಪ್ರತಿಷ್ಠಿತ ಮುಂಬೈ ಭಾರತ್ ಕೋ ಆಪರೇಟಿವ್ ಅಧ್ಯಕ್ಷ ಸೂರ್ಯಕಾಂತ ಸುವರ್ಣ,ಮುಲ್ಕಿ ನಗರ ಪಂಚಾಯತ್ ಸದಸ್ಯ ಬಾಲಚಂದ್ರ ಕಾಮತ್,ಉದ್ಯಮಿ ಪ್ರಭಾಕರ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಸಂಸ್ಕೃತಿ ಚಿಂತಕರಾದ ಡಾ. ಅರುಣ್ ಉಳ್ಳಾಲ್ ರವರು ಮುಖ್ಯ ಭಾಷಣ ಮಾಡಿದರು.
ಬಪ್ಪನಾಡು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಸುವರ್ಣ ಸ್ವಾಗತಿಸಿದರು.
ಗಿರೀಶ್ ದೇವಾಡಿಗ ನಿರೂಪಿಸಿದರು.
ಸಮಿತಿಯ ಕಾರ್ಯದರ್ಶಿ ಸುನಿಲ್ ಆಳ್ವಾ ಧನ್ಯವಾದ ಅರ್ಪಿಸಿದರು ಕಾರ್ಯಕ್ರಮದಲ್ಲಿ ಸಾರ್ವಜನಿಕ ಗಣೇಶೋತ್ಸವದ ಸ್ಥಾಪಕ ಸದಸ್ಯರುಗಳಿಗೆ ಗೌರವಾರ್ಪಣೆ ನಡೆಯಿತು ಹಾಗೂ ಮಂಗಳೂರಿನ ಸನಾತನ ನಾಟ್ಯಾಲಯದ ವತಿಯಿಂದ ನೃತ್ಯ ವೈವಿಧ್ಯ “ಸನಾತನ ರಾಷ್ಟ್ರಾಂಜಲಿ” ನಡೆಯಿತು.

LEAVE A REPLY

Please enter your comment!
Please enter your name here