ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಚಂಬಲ್ ಕಣಿವೆಯ ದರೋಡೆಕೋರರನ್ನು ಮೀರಿಸುವಂತೆ ಜನಸಾಮಾನ್ಯರ ಸುಲಿಗೆಗೆ ಮುಂದಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕಟಣೆ ನೀಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್, ಪಾರ್ಕಿಂಗ್ ಟ್ಯಾಕ್ಸ್, ನೀರಿನ ದರ ಹೆಚ್ಚಳ ಸೇರಿದಂತೆ ಹಲವಾರು ರೀತಿಯಲ್ಲಿ ಸಿದ್ದರಾಮಯ್ಯ ಸರ್ಕಾರ ‘ತೆರಿಗೆ ಭಯೋತ್ಪಾದನೆ’ ನಡೆಸುತ್ತಿದೆ ಎಂದು ಆರೋಪಿಸಿದರು. ಗಣೇಶ ಹಬ್ಬದ ಸಂಭ್ರಮದ ಮರುದಿನವೇ ದಸ್ತಾವೇಜುಗಳ ನೋಂದಣಿ ಹಾಗೂ ಮುದ್ರಾಂಕ ಶುಲ್ಕವನ್ನು ಶೇ.1ರಿಂದ 2ಕ್ಕೆ ಏರಿಸಲಾಗಿದ್ದು, ಸೋಮವಾರದಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದರು.

