ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಆಶ್ರಯದಲ್ಲಿ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಪ್ರೊ. ಪದ್ಮನಾಭ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರೇಣುಕಾ ಕಣಿಯೂರ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ದುಶ್ಚಟ ಬಲಿಯಾಗುವ ವಿವಿಧ ಬಗ್ಗೆ, ಆದ್ದರಿಂದ ದೂರವಿರುವ ಬಗ್ಗೆ, ದುಶ್ಚಟದಿಂದ ಆಗುವ ಕುಟುಂಬ ಮತ್ತು ಸಮಾಜಕ್ಕೆ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶಶಿಕಲಾ, ಶ ಸುಜಾತ, ವಲಯದ ಮೇಲ್ವಿಚಾರಕ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಆಶಾ, ಕು. ಚೇತನ ಕಾರ್ಯಕ್ರಮಕ್ಕೆ ಸಹಕರಿಸಿದರು.

