ಸೆ. 7: ಕಡಂದಲೆ-ಪಾಲಡ್ಕ ಬಿಲ್ಲವ ಸಂಘದಲ್ಲಿ ವಾರ್ಷಿಕ ಗುರುಪೂಜೆ

0
210

ಮೂಡುಬಿದಿರೆ: ಕಡಂದಲೆ-ಪಾಲಡ್ಕ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಹಾಗೂ ವಾರ್ಷಿಕ ಮಹಾಪೂಜೆ ಸೆ. 7ರಂದು ನಡೆಯಲಿದೆ.
ಕಾರ್ಕಳ ಆನೆಕೆರೆ ಶ್ರೀಕೃಷ್ಣ ಕ್ಷೇತ್ರದ ಪ್ರಧಾನ ಅರ್ಚಕ ಸದಾನಂದ ಶಾಂತಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಭಜನಾ ಕಾರ್ಯಕ್ರಮ, ಮಹಾಪೂಜೆ ಬಳಿಕ ಧಾರ್ಮಿಕ ಸಭೆ ನಡೆಯಲಿದೆ. ಸಂಘದ ಅಧ್ಯಕ್ಷ ಲೀಲಾಧರ ಪೂಜಾರಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ವಕೀಲೆ ಮೇಘರಾಣಿ ಧಾರ್ಮಿಕ ಉಪನ್ಯಾಸ ನೀಡಲಿರುವರು. ಶಾಸಕ ಉಮಾನಾಥ ಎ.ಕೋಟ್ಯಾನ್, ಯುವವಾಹಿನಿ ಮೂಡುಬಿದಿರೆ ಅಧ್ಯಕ್ಷ ಮುರಳೀಧರ ಕೋಟ್ಯನ್, ಸಂಘದ ಗೌರವಾಧ್ಯಕ್ಷ ಪ್ರದ್ಮನಾಭ ಎಸ್.ಅಮೀನ್ ಕಡೇಕಾರು, ಸೇವಾದಳದ ಅಧ್ಯಕ್ಷ ಸೀತಾರಾಮ ಸಾಲ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಗಣೇಶ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷ ಶಿವರಾಮ ಅಮೀನ್ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here