ಮೂಡುಬಿದಿರೆ: ಸೆ. 7ರಂದು ಮೂರ್ತಿ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ, ಗುರುಜಯಂತಿ ಕಾರ್ಯಕ್ರಮ

0
97

ಮೂಡುಬಿದಿರೆ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಮೂಡುಬಿದಿರೆ, ಶ್ರೀ ನಾರಾಯಣ ಗುರು ಸೇವಾದಳ ಮತ್ತು ಶ್ರೀ ನಾರಾಯಣಗುರು ಮಹಿಳಾ ಘಟಕ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೧ನೇ ಜನ್ಮ ದಿನಾಚರಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆಯ ೩೯ನೇ ವಾರ್ಷಿಕೋತ್ಸವ ಸಮಾರಂಭ, ಗುರುಜಯಂತಿ ಕಾರ್ಯಕ್ರಮವು ಸೆ. 7ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕಾಮಧೇನು ಸಭಾಭವನದಲ್ಲಿ ನಡೆಯಲಿದೆ.

ಪ್ರದೀಪ್‌ ಶಾಂತಿ ಕಾಶಿಪಟ್ಣ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಾನಗಳಾದ ಗುರುಸ್ತುತಿ, ಗಣಹೋಮ, ಪಂಚಾಮೃತ ಅಭಿಷೇಕ ಹಾಗೂ ಬೆಳಿಗ್ಗೆ 10-00 ಗಂಟೆಗೆ ಮಹಾಪೂಜೆ ನೆರವೇರಲಿದೆ. ಮಧ್ಯಾಹ್ನ 2-00 ಗಂಟೆಯಿಂದ ತೆಲಿಕೆದ ತೆನಾಲಿ ತಂಡದವರಿಂದ ತೆಲಿಕೆದ ಬರ್ಸ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 11-00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಘದ ಅಧ್ಯಕ್ಷರಾದ ನೋಟರಿ ವಕೀಲ ಸುರೇಶ್‌ ಕೆ. ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಉಮಾನಾಥ ಎ. ಕೋಟ್ಯಾನ್‌ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಖ್ಯಾತ ವಾಗ್ಮಿ ಎನ್.‌ಆರ್.‌ ದಾಮೋದರ ಶರ್ಮಾ ಬಾರ್ಕೂರು ಅವರು ಗುರುಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಹಲವು ಅತಿಥಿ ಗಣ್ಯರು ಭಾಗವಹಿಸಲಿದ್ದು, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here