ಪುoಚಮೆಯಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಿಸಿ ಮೈಕ್ ಹಾಕಿ ಸಾರ್ವಜನಿಕರಿಗೆ ತೊಂದರೆ; ಹಿಂ.ಜಾ.ವೇ.ಯಿಂದ ಬಂಟ್ವಾಳ ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು

0
162


ಬಂಟ್ವಾಳ: ಇಲ್ಲಿಯ ಪುoಚಮೆ ಎಂಬಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡಿ ಯಾವುದೇ ಲೈಸೆನ್ಸ್ ಇಲ್ಲದೆ ಮೈಕ್ ಹಾಕಿ ಅಜಾನ್ ಕೂಗಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿರುವ ಬಗ್ಗೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಇದರ ವತಿಯಿಂದ ಬಂಟ್ವಾಳ ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಇಲ್ಲಿ ಬಹುಮಹಡಿ ಕಟ್ಟಡವನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದೆ. ಪಂಚಾಯತ್‌ ನೀಡಿದ ನೋಟಿಸನ್ನೂ ಲೆಕ್ಕಿಸದೆ ಎತ್ತರದಲ್ಲಿ ಆವರಣ ಗೋಡೆ ನಿರ್ಮಿಸಲಾಗಿದೆ. ಕಟ್ಟಡದ ಮೇಲ್ಗಡೆ ಕಾನೂನು ಬಾಹಿರವಾಗಿ ಮೈಕ್‌ ಅಳವಡಿಸಿ ಅಜಾನ್‌ ಕೂಗುತ್ತಿದ್ದು, ಪರಿಸರದ ಜನ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ನಿಯೋಗದಲ್ಲಿ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಸಂಯೋಜಕ ನರಸಿಂಹ ಮಾಣಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪುಷ್ಪರಾಜ್ ಕಮ್ಮಾಜೆ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅನೂಪ್ ಮಯ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here