ರೇಡಿಯೋ ಮಣಿಪಾಲದಲ್ಲಿ ಆರೋಗ್ಯ ದರ್ಶನ ಕಾರ್ಯಕ್ರಮ

0
66

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ಅರ್ಪಿಸುತ್ತಿದೆ ಆರೋಗ್ಯ ದರ್ಶನ ಸರಣಿ ಕಾರ್ಯಕ್ರಮ.
ಸೆಪ್ಟೆಂಬರ್ 3ರಂದು ಬುಧವಾರ ಸಂಜೆ 5 ಗಂಟೆಗೆ ಪ್ರಸಾರವಾಗುವ ಆರೋಗ್ಯ ದರ್ಶನ ಸಂಚಿಕೆಯಲ್ಲಿ *ಹೃದಯದ ಆರೋಗ್ಯ ಮತ್ತು ಪೌಷ್ಟಿಕ ಆಹಾರ ಕುರಿತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಕ್ಲಿನಿಕಲ್ ನ್ಯೂಟ್ರಿಷನ್ ಆ್ಯಂಡ್ ಡಯಟಾಟಿಕ್ಸ್ ವಿಭಾಗದಲ್ಲಿ ಪಥ್ಯಾಹಾರ ತಜ್ಞರಾಗಿರುವ ಶ್ವೇತಾ ಕೋಟ್ಯಾನ್ ವಿಶೇಷ ಮಾಹಿತಿ ನೀಡಲಿದ್ದಾರೆ. ಇದು ಗುರುವಾರ ಮಧ್ಯಾಹ್ನ 1 ಗಂಟೆಗೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here